×
Ad

ವಿಶ್ವಕರ್ಮ ಸಹಕಾರ ಬ್ಯಾಂಕಿನಿಂದ ಸ್ವಚ್ಛ ಭಾರತ್ ಕಾರ್ಯಕ್ರಮ

Update: 2025-10-21 19:22 IST

ಉಡುಪಿ, ಅ.21: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ ಇಂದು ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ, ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ವಿ.ರಮನಾಚಾರ್ಯ ಚಾಲನೆ ನೀಡಿದರು.

ಬ್ಯಾಂಕಿನ ಉಪಾಧ್ಯಕ್ಷ ಪಿ.ಜಗದೀಶ್ ಆಚಾರ್ಯ, ನಿರ್ದೇಶಕ ಜಗದೀಶ್ ಜೆ.ಆಚಾರ್ಯ, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ವೆಂಕಟೇಶ್ ಆಚಾರ್ಯ ಕುತ್ಪಾಡಿ, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರವಿಚಂದ್ರ ಮಾರಾಳಿ, ಮಾಜಿ ಅಧ್ಯಕ್ಷ ಕಿಶೋರ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ನಿವೃತ್ತ ಸೇನಾ ಅಧಿಕಾರಿ ಕೇಶವ ಆಚಾರ್ಯ ದೊಡ್ನಗುಡ್ಡೆ, ವಿಷ್ಣುಮೂರ್ತಿ ಫ್ರೆಂಡ್ಸ್ ದೊಡ್ನಗುಡ್ಡೆ ಅಧ್ಯಕ್ಷರು ಮತ್ತು ಸದಸ್ಯರು, ವಿರಾಡ್ ವಿಶ್ವಕರ್ಮ ಶಿಲ್ಪಕಲಾ ಸಂಘ ಅಂಬಲಪಾಡಿ ಇದರ ಅಧ್ಯಕ್ಷರು ಮತ್ತು ಸದಸ್ಯರು, ಸುಚಿತ್ ನೇತೃತ್ವದ ಪಿ.ಪಿ.ಸಿ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕರ್ತರು, ಬ್ಯಾಂಕಿನ ಸಿಬ್ಬಂದಿ ಹಾಗೂ ಗ್ರಾಹಕರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News