ಮುಂದಿನ ತಿಂಗಳು ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಆರಂಭ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಾಪು, ಅ.21: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಟಪಾಡಿ ಜಂಕ್ಷನ್ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿ ಕಾರಿಗಳೊಂದಿಗೆ ಇಂದು ಭೇಟಿ ನೀಡಿ ಯೋಜ ನೆಯ ಪರಿಶೀಲನೆಯನ್ನು ನಡೆಸಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.
ಈ ಭಾಗದಲ್ಲಿ ವಾಹನ ದಟ್ಟಣೆಯಿಂದ ನಿರಂತರ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿ ರುವ ಗಮನದಲ್ಲಿಟ್ಟುಕೊಂಡು ಅಂಡರ್‌ಪಾಸ್ ಕಾಮಗಾರಿಗೆ ಮುಂದಾಗಿದ್ದೇವೆ. ನವೆಂಬರ್ ಮೊದಲ ವಾರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಕಾಮಗಾರಿಯ ವೇಳೆ ಉಡುಪಿ ಭಾಗಕ್ಕೆ ತೆರಳುವ ಸರ್ವಿಸ್ ಬಸ್ಸುಗಳನ್ನು ಹಳೆ ಎಂಬಿಸಿ ರಸ್ತೆಯಲ್ಲಿ ಸಂಚರಿಸು ವುದು. ಕಿನ್ನಿಮುಲ್ಕಿ, ಕಲ್ಯಾಣಪುರ ಭಾಗಕ್ಕಿಂತ ವಾಹನ ದಟ್ಟಣೆ ಅಧಿಕವಾಗಿರುವ ಕಟಪಾಡಿಯನ್ನು ಗಮನದಲ್ಲಿರಿಸಿ ಸುವ್ಯವಸ್ಥಿತವಾಗಿ ಕಾಮಗಾರಿಯನ್ನು ಪೂರೈಸಲು ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಮಂಗಳೂರು-ಉಡುಪಿ-ಕುಂದಾಪುರ ಸಂಪರ್ಕದ ಸರ್ವೀಸ್ ರಸ್ತೆಯಲ್ಲಿ ವಾಹನಗಳ ಸಂಚಾರದ ಪಥವನ್ನು ಬದಲಾಯಿಸುವ ಬಗ್ಗೆ ಚರ್ಚಿಸ ಲಾಯಿತು. ಕಟಪಾಡಿ-ಶಿರ್ವ ಸಂಪರ್ಕ ರಸ್ತೆಯ ಬಗ್ಗೆ ಸಮಾಲೋಚನೆ ನಡೆಸಲಾ ಯಿತು. ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ಹಾಗೂ ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ಸಿದ್ಧರಿದ್ದಾರೆ ಎಂದು ಅವರು ಹೇಳಿದರು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ಕಟಪಾಡಿ ಗ್ರಾಪಂ ಅಧ್ಯಕ್ಷೆ ಪ್ರಭಾ ಬಿ.ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ಪಿಡಿಒ ತಿಲಕ್‌ರಾಜ್, ಕಾಪು ಪೊಲೀಸ್ ಠಾಣೆ ಪಿಎಸ್‌ಐ ತೇಜಸ್ವಿ ಪಿ. ಮತ್ತಿತರರು ಉಪಸ್ಥಿತರಿದ್ದರು.