ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2025-10-26 20:38 IST
ಹೆಬ್ರಿ, ಅ.26: ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅ.26ರಂದು ಬೆಳಗ್ಗೆ 38ನೇ ಕಳ್ತೂರು ಗ್ರಾಮದ ಸಂತೆಕಟ್ಟೆಯ ಮೂಲ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಸಂತೆಕಟ್ಟೆಯ ಬಾಬು ನಾಯ್ಕ್(55) ಎಂದು ಗುರುತಿಸ ಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಪ್ರತಿದಿನ ಮನೆಯ ಪಕ್ಕದಲ್ಲಿರುವ ಕಟ್ಟೆ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿದ್ಯುತ್ ಇಲ್ಲದ ಕಾರಣ ಮನೆಯ ಎದುರಿನಲ್ಲಿರುವ ಬಾವಿಯಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.