×
Ad

ಉಡುಪಿ: ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ‘ಜ್ಞಾನಂ’ ಸ್ಪರ್ಧೆ

Update: 2025-10-28 21:29 IST

ಉಡುಪಿ, ಅ.28: ಉಡುಪಿಯ ಶ್ರೀಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಉಡುಪಿ, ಮಂಗಳೂರು, ಕಾಕ‰ಳ ಹಾಗೂ ಕುಂದಾಪುರದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ, ಸಾಂಸ್ಕೃತಿಕ ಹಾಗೂ ಐಟಿ ಸ್ಪರ್ಧೆಗಳ ‘ಜ್ಞಾನಂ’ ಮಂಗಳವಾರ ನಡೆಯಿತು.

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ, ವಾಣಿಜ್ಯ ವಿಭಾಗ, ಮಾಹಿತಿ ತಂತ್ರಜ್ಞಾನ ಹಾಗೂ ಕಲಾ ವಿಭಾಗಗಳಿಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾದ ವಿಶಿಷ್ಟ ಸ್ಪರ್ಧೆಯನ್ನು ಉಡುಪಿ ಶಾಸಕ ಹಾಗೂ ಕಾಲೇಜಿನ ಹಳೆವಿದ್ಯಾರ್ಥಿ ಯಶಪಾಲ್ ಸುವರ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಂಡು ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಅರಿತು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಭಾಗವಹಿಸಿ ಮಾತನಾಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಸಿಎ ಟಿ.ಪ್ರಶಾಂತ್ ಹೊಳ್ಳ ಶುಭಾಂಸನೆಯ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ್ ಭಟ್ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ.ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿನಾಯಕ್ ಪೈ ಬಿ., ಡಾ. ಪ್ರಜ್ಞಾ ಮಾರ್ಪಳ್ಳಿ ಕಾರ್ಯಕ್ರಮ ಸಂಯೋಜಕ ರಾದ ಗೌರಿ ಶೆಣೈ ಉಪಸ್ಥಿತರಿದ್ದರು.

ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ ಸ್ವಾಗತಿಸಿ, ರಾನಿಯ ಕಾರ್ಯಕ್ರಮ ನಿರೂಪಿಸಿದರು. ಎನ್ನೆಸ್ಸೆಸ್ ಘಟಕ ನಾಯಕ ವಿಶ್ವಾಸ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News