ದ್ವಿಚಕ್ರ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2025-10-31 22:09 IST
ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಎಂಜಿಎಂ ಕಾಲೇಜು ಬಳಿ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರ ಸಂಜೆ 5ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಮೂಲತ: ಬಾಗಲಕೋಟೆ ಜಿಲ್ಲೆಯವರಾಗಿದ್ದು, ಸದ್ಯ ಎಂಜಿಎಂ ಕಾಲೇಜು ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಂಗಪ್ಪ (62) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲು ಎಂಜಿಎಂ ಕಾಲೇಜು ಎದುರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಉಡುಪಿ ಕಡೆಯಿಂದ ಮಣಿಪಾಲದತ್ತ ವೇಗವಾಗಿ ಧಾವಿಸುತಿದ್ದ ಬೈಕೊಂದು ಡಿಕ್ಕಿ ಹೊಡೆದಿತ್ತು.
ಇದರಿಂದ ರಂಗಪ್ಪ ಅವರ ತಲೆ, ಬಲಗಾಲು ಹಾಗೂ ಬಲಕೈಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಚಿಕಿತ್ಸೆಗೆ ಸ್ಪಂದಿಸದ ರಂಗಪ್ಪ ರಾತ್ರಿ ವೇಳೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.