×
Ad

ನಾಡು ನುಡಿಯ ಬಗ್ಗೆ ವಿಶೇಷ ಕಾಳಜಿ ವಹಿಸಿ: ಕೋಟ ಎಸ್ಸೈ ಪ್ರವೀಣ್ ಕುಮಾರ್

Update: 2025-11-01 19:16 IST

ಕೋಟ, ನ.1: ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ ಬದಲಾಗಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಉಳಿಸಿ ಬೆಳೆಸಲು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಹೇಳಿದ್ದಾರೆ.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ 28ನೇ ವರ್ಷ ಸದ್ಭಾವನಾ ನಾಡುನುಡಿಗೆ ಭಾವ ನಮನ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಬೇರೆ ಭಾಷೆಗಳನ್ನು ಗೌರವಿಸುವುದರ ಜತೆಗೆ ಮಾತೃ ಭಾಷೆಗೆ ವಿಶೇಷ ಆಸಕ್ತಿ ತೋರಬೇಕು. ನಮ್ಮ ಭಾಷೆ ಮನೆ ಮನಗಳಲ್ಲಿ ನಿತ್ಯ ನಿರಂತರ ವಾಗಿಸಿಸಬೇಕು. ಪ್ರಸ್ತುತ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯದಲ್ಲಿ ಕನ್ನಡ ಸಂಘಟನೆಗಳು ಕೈಜೋಡಿಸಬೇಕಿದೆ ಎಂದರು.

ಕಾರ್ಯಕ್ರಮವನ್ನು ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಎಚ್. ಕುಂದರ್ ಉದ್ಘಾಟಿಸಿದರು. ಕನ್ನಡ ಧ್ವಜವನ್ನು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಅರಳಿಸಿ ಭುವನೇಶ್ವರಿಗೆ ಪುಷ್ಭ ನಮನ ಸಲ್ಲಿಸಿದರು. ಇದೇ ವೇಳೆ ಸಾಮಾಜಿಕ ಸೇವೆಗೈಯುತ್ತಿರುವ ಕೋಟದ ಹರ್ತಟ್ಟು ಮಂಜುನಾಥ್ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ ಕೋಟ, ಪರಿಸರವಾದಿ ಕೋ.ಗಿ.ನಾ., ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಸನ್ಮಾನ ಪತ್ರವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು ವಾಚಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ ದರು. ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ಯ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ಕಾರ್ಯಕ್ರಮ ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News