×
Ad

ಉಡುಪಿ: ಕನಕ ಗಾಯನ ಸ್ಪರ್ಧೆ

Update: 2025-12-17 19:37 IST

ಉಡುಪಿ: 47ನೇ ‘ವಾದಿರಾಜ-ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ಡಿ.28ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ ಸಂಸ್ಥೆಗಳು ಸಂಘಟಿಸಿವೆ.

ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ- ಕನಕ ಗಾಯನ ಸ್ಪರ್ಧೆಯನ್ನು ಡಿ.27ರಂದು ಬೆಳಿಗ್ಗೆ 9:00 ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪದಲ್ಲಿ ನಡೆಸಲಾಗುವುದು.

ಸ್ಪರ್ಧಾಳುಗಳು ವಾದಿರಾಜ ಮತ್ತು ಕನಕದಾಸರ ಎರಡೆರಡು ಕೀರ್ತನೆ ಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂಜಿಎಂ ಕಾಲೇಜು ಆವರಣ, ಉಡುಪಿ 576102 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು ಅಥವಾ ಸ್ಪರ್ಧೆಯ ದಿನ ಸ್ಥಳದಲ್ಲೇ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ: 9964140601/ 9449471449/ 9448868868, ಇಮೇಲ್:- rgpaiudupi@gmail.com-ನ್ನು ಸಂಪರ್ಕಿ ಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News