ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ
ನಿಟ್ಟೆ: ಕಾರ್ಕಳದ ನಿಟ್ಟೆ ಕ್ಯಾಂಪಸ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕಾರ್ಕಳ ಕ್ರೈಸ್ಟ್‌ಕಿಂಗ್ ಚರ್ಚ್‌ನ ಸಹಾಯಕ ಧರ್ಮಗುರು ವಂ.ಅವಿನಾಶ್ ಲೆಸ್ಲೆ ಪಾಯ್ಸ್ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡುತ್ತಾ, ಪ್ರೀತಿಯನ್ನು ನೀಡುವ ಮತ್ತು ಹರಡುವ ಮನೋಭಾವ ಸ್ಪೂರ್ತಿದಾಯಕ, ಅನುಕರಣೀಯ ಎಂದರು.
ಅತಿಥಿಗಳಾಗಿ ಉಪಸ್ಥಿತರಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್.ಚಿಪ್ಳೂಣ್ಕರ್ ಮಾತನಾಡಿ, ಇಂತಹ ಆಚರಣೆಗಳು ಕ್ಯಾಂಪಸ್‌ನಲ್ಲಿ ಒಂದು ರೀತಿಯ ಲವಲವಿಕೆಯನ್ನು ಅರಳಿಸುತ್ತದೆ ಎಂದರು.
ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದು, ತಮ್ಮ ಭಾಷಣದಲ್ಲಿ ಏಕತೆ, ಸಹಾನುಭೂತಿ ಮತ್ತು ಕ್ರಿಸ್‌ಮಸ್‌ನ ನಿಜವಾದ ಸಾರವನ್ನು ವಿವರಿಸಿದರು.
ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಂಶುಪಾಲರು, ವಿದ್ಯಾರ್ಥಿ ವಸತಿಗೃಹದ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮ ಹಾಡುಗಾರಿಕೆ, ನಾಟಕ ಮತ್ತು ಸಾಂಸ್ಕೃತಿಕ ನೃತ್ಯಗಳು ಸೇರಿದಂತೆ ವಿವಿಧ ಪ್ರದರ್ಶನಗಳನ್ನು ಒಳಗೊಂಡಿತ್ತು.