×
Ad

ಗಾಂಧಿ ಆಸ್ಪತ್ರೆಯಲ್ಲಿ ಕಾಗದರಹಿತ ಡಿಜಿಟಲ್ ದಾಖಲೆ ವ್ಯವಸ್ಥೆ ಉದ್ಘಾಟನೆ

Update: 2026-01-02 18:42 IST

ಉಡುಪಿ, ಜ.2: ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಕಾಗದರಹಿತ ಒಳರೋಗಿ ಡಿಜಿಟಲ್ ದಾಖಲೆ ನಿರ್ವಹಣಾ ವ್ಯವಸ್ಥೆಯನ್ನು ರಾಘವೇಂದ್ರ ಮಠದ ಶ್ರೀಸುಬುಧೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸುವ ಮೂಲಕ ಪ್ರಕೃತಿಯ ಸಂರಕ್ಷಣೆ ಸಾಧ್ಯ. ಕಾಗದ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ರಕ್ಷಣೆಗೂ ಸಹಕಾರ ದೊರೆಯುತ್ತದೆ ಎಂದು ಹೇಳಿದರು.

ಗಾಂಧಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹರಿಶ್ಚಂದ್ರ ಹಾಗೂ ಅವರ ಪತ್ನಿ ಲಕ್ಷ್ಮಿ, ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ.ಅಶೋಕ್ ಕುಮಾರ್ ಕಾಮತ್, ಎಪಿಐ ಅಧ್ಯಕ್ಷ ಡಾ.ಸುರೇಶ್ ಹೆಗಡೆ, ಮಾಜಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಧುಸೂಧನ ನಾಯಕ್, ಹಿರಿಯ ವೈದ್ಯರಾದ ಡಾ.ಚಂದ್ರಶೇಖರ್ ಅಡಿಗ, ಡಾ.ಆರ್.ಎನ್.ಭಟ್, ಡಾ.ಅಶೋಕ್ ಕುಮಾರ್ ವೈ.ಜಿ., ಹೃದಯ ರೋಗ ತಜ್ಞ ಡಾ.ವಿಷುಕುಮಾರ್, ಡಾ.ಕಿರಣ್ ಕುಮಾರ್, ಹಿರಿಯರಾದ ಅಗ್ರಹಾರ ಲಕ್ಷ್ಮೀನಾರಾಯಣ ತಂತ್ರೀ, ದಾಮೋದರ ಭಟ್, ಉಡುಪಿ ರಾಘವೇಂದ್ರ ಮಠದ ವ್ಯವಸ್ಥಾಪಕ ಜಯತೀರ್ಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಿಜಿಟಲ್ ದಾಖಲೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ ಡಿ-ಸ್ಕ್ರೈಬ್ ಸಾಫ್ಟ್‌ವೇರ್‌ನ ಸಹ ಸಂಸ್ಥಾಪಕರಾದ ಅಕ್ಷಯ ವಿ.ನಾಯಕ್ ಹಾಗೂ ಕಿರಣ್ ರಾವ್ ಅವರನ್ನು ಗೌರವಿಸಲಾಯಿತು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಸ್ವಾಗತಿಸಿದರು. ಯೂಸುಫ್ ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News