ಕುಂದೇಶ್ವರ ಸಮ್ಮಾನ್, ಕಲಾಭೂಷಣ ಪ್ರಶಸ್ತಿ ಪ್ರದಾನ
ಕಾರ್ಕಳ, ಜ.25: ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀನಾರಾಯಣಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಉದಯ ಶೆಟ್ಟಿ ಮುನಿಯಾಲು ಮಾತನಾಡಿದರು.
ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ, ನಿಟ್ಟೆ ಗ್ರಾಪಂ ಮಾಜಿ ಅಧ್ಯಕ್ಷ ನವೀನ್ ನಾಯಕ್, ಧರ್ಮದರ್ಶಿಗಳಾದ ಗಂಗಾ ಆರ್.ಭಟ್, ಪ್ರಧಾನ ಅರ್ಚಕರಾದ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ, ಸೃಷ್ಟಿ ಕಲಾವಿದ್ಯಾಲಯ ಸಂಸ್ಥಾಪಕ ಛಾಯಾಪತಿ ಕಂಚಿಬೈಲ್, ಉದ್ಯಮಿ ಸತೀಶ್ ಭಟ್ ಕುಂದೇಶ್ವರ, ಸಿರಿಯಣ್ಣ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ, ಅರ್ಚಕರಾದ ಸುಧೀಂದ್ರ ಭಟ್, ಸುಜ್ಞೇಂದ್ರ ಭಟ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಂಜುನಾಥ ಪೂಜಾರಿ ಮುದ್ರಾಡಿ ಹಾಗೂ ದೇಗುಲ ದ್ವಾರಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಿಸಿದ ರಮಾನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಗಿಣಿ ಉಪೇಂದ್ರ ರಾವ್ ಪ್ರಾರ್ಥಿಸಿದರು. ಕಾವ್ಯಶ್ರೀ ಅಜೇರು ಮತ್ತು ಲಕ್ಷ್ಮಿ ನಾರಾಯಣ ಹೊಳ್ಳ ದ್ವಂದ್ವ ಭಾಗವತಿಕೆಯಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ತಾಳಮದ್ದಲೆ ನಡೆಯಿತು. ರಂಜಿನಿ ಲಕ್ಷ್ಮೀನಾರಾಯಣ ದಾಕ್ಷಾಯಿಣಿ ಏಕಪಾತ್ರಾಭಿನಯ ಪ್ರದರ್ಶಿಸಿದರು. ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಂಡಿತು.