ನೇಜಾರು ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಎಂಟು ಸಾಕ್ಷಿಗಳ ವಿಚಾರಣೆ
Update: 2026-01-31 21:29 IST
ಪ್ರವೀಣ್ ಚೌಗುಲೆ
ಉಡುಪಿ, ಜ.31: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜ.30 ಮತ್ತು ಜ.31ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.
ಪ್ರಕರಣಕ್ಕೆ ಸಂಬಂಧಿಸಿ ಮಹಜರು ನಡೆಸಿದ ಖಾಸಗಿ ಸಾಕ್ಷಿಗಳ ಮುಖ್ಯ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ನಡೆಸಿದರೆ, ಆರೋಪಿ ಪರ ವಕೀಲ ರಾಜು ಪೂಜಾರಿ ಪಾಟಿಸವಾಲು ನಡೆಸಿ ದರು. ಈ ಮೂಲಕ ಈವರೆಗೆ ಈ ಪ್ರಕರಣದಲ್ಲಿ ಒಟ್ಟು 26 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ.
ಮುಂದಿನ ವಿಚಾರಣೆಯನ್ನು ಫೆ.27 ಮತ್ತು 28ಕ್ಕೆ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಆ ದಿನದಂದು ಮತ್ತೆ 10-15 ಸಾಕ್ಷಿಗಳ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲು ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.