×
Ad

ಕರಾವಳಿಗೆ ವಂದೇ ಭಾರತ್, ಹಳಿ ದ್ವಿಪಥಕ್ಕೆ ಬೇಡಿಕೆ: ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಕೋಟ

Update: 2026-02-03 19:59 IST

ಉಡುಪಿ, ಫೆ.3: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಹೊಸದಿಲ್ಲಿಯ ಅವರ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ಭೇಟಿ ಮಾಡಿದ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು- ಮಂಗಳೂರು ವಂದೇ ಭಾರತ್ ರೈಲನ್ನು ಉಡುಪಿ ಮೂಲಕ ಉತ್ತರ ಕನ್ನಡದ ಕಾರವಾರದವರೆಗೆ ವಿಸ್ತರಿಸಬೇಕಾದ ಅಗತ್ಯವನ್ನು ವಿವರಿಸಿ ಮನವಿ ಸಲ್ಲಿಸಿದರು.

ಪ್ರತಿದಿನ ಉತ್ತರ ಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600ಕ್ಕೂ ಹೆಚ್ಚು ಬಸ್‌ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇಭಾರತ್ ರೈಲನ್ನು ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.

ಇದರೊಂದಿಗೆ, ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ. ಉದ್ದದ ರೈಲ್ವೆ ಹಳಿಯನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಲು ಹಣ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.

ಹಲವು ವಷರ್ಗಳಿಂದ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇದೀಗ ನರೇಂದ್ರ ಮೋದಿ ಸರಕಾರದ ತುರ್ತು ಕ್ರಮಗಳಿಂದ ಸಾಕಷ್ಟು ಪ್ರಗತಿ ಕಂಡು ಬರುತ್ತಿದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಸಂಸದ ಕೋಟ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News