×
Ad

ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Update: 2026-02-03 22:21 IST

ಮಲ್ಪೆ, ಫೆ.3: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ಅಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ನಾಗಲಿಂಗಮ್ (51) ಎಂಬವರು ಇಮ್ಯಾನುವೆಲ್ ಕಿರಣ ಎಂಬವರ ರಾಯಲ್ ಫಿಶರಿಶ್ ಎಂಬ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿ ಕೊಂಡಿದ್ದು, ಜ.31ರಂದು ರಾತ್ರಿ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮಧ್ಯೆ ಬೋಟು ಹೋಗುತ್ತಿರುವಾಗ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News