ರಾಷ್ಟ್ರೀಯ ಹೆದ್ದಾರಿ ಇಲಾಖೆ ಎಇಇ ಮಂಜುನಾಥ್ ನಾಯಕ್ ನಿಧನ
Update: 2026-03-06 20:45 IST
ಕಾರ್ಕಳ, ಮಾ.6: ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಎಇಇ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಕಳ ಕುಕ್ಕುಂದೂರು ನಿವಾಸಿ ಮಂಜುನಾಥ್ ನಾಯಕ್(52) ಗುರುವಾರ ಶೃಂಗೇರಿಯಲ್ಲಿ ಹೃದಯಾಘಾತದಿಂದ ನಿಧನರಾದರು.
ಕಳೆದ 20 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಇವರು, ಪ್ರಸ್ತುತ ಶೃಂಗೇರಿ ಉಪ ವಿಭಾಗದಲ್ಲಿ ಎಇಇ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸುದೀರ್ಘ ಸೇವಾವಧಿಯಲ್ಲಿ ತೀರ್ಥ ಹಳ್ಳಿ, ಶೃಂಗೇರಿ, ಹೆಬ್ರಿ, ಉಡುಪಿ-ಮಲ್ಪೆ ಹಾಗೂ ಕಾರ್ಕಳ-ಮಾಳ ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗಳ ಅನುಷ್ಠಾನದಲ್ಲಿ ಅತ್ಯಂತ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.