ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್ ನಿಧನ
Update: 2026-03-08 19:40 IST
ಶಿರ್ವ, ಮಾ.8: ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್ (55) ಅಲ್ಪಕಾಲದ ಅಸೌಖ್ಯದಿಂದ ಮಾ.7ರಂದು ರಾತ್ರಿ ನಿಧನರಾದರು.
ಕಳೆದ 8 ವರ್ಷಗಳಿಂದ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆಯಲ್ಲಿದ್ದು, ಕಳೆದ ಐದು ವರ್ಷಗಳಿಂದ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯದಲ್ಲಿದ್ದರು. ಇವರು ಪತ್ನಿ, ಪುತ್ರ ಹಾಗೂ ಬಂಧುಗಳನ್ನು ಅಗಲಿದ್ದಾರೆ.