×
Ad

ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2026-03-09 19:43 IST

ಉಡುಪಿ, ಮಾ.9: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಪ್ರಿಲ್ 5ರಂದು ಹಾಗೂ ಎಪ್ರಿಲ್ 14ರಂದು ಕ್ರಮವಾಗಿ ಡಾ.ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಗಳನ್ನು ಆಚರಿಸುವ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಜನಾಂಗದ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ.ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಇದೀಗ ಮಾ.10ರ ಬದಲು ಮಾ.15ಕ್ಕೆ ಮುಂದುವರಿಸಲಾಗಿದೆ. ಹೀಗಾಗಿ ಆಸಕ್ತರು ಮಾರ್ಚ್ 15ರ ಒಳಗೆ ಕೇಂದ್ರ ಕಚೇರಿ ಅಥವಾ ಸಂಬಂಧಿತ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಅರ್ಜಿ ಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News