ಲಾಡ್ಜ್‌ನ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
Update: 2026-03-09 20:55 IST
ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್‌ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಚಿತ್ರದುರ್ಗದ ಜಗದೀಶಪ್ಪ ಜೆ. ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಫೆ.20ರಂದು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಬಂದು ಮಣಿಪಾಲ ಈಶ್ವರ ನಗರ ಲಾಡ್ಜ್‌ನ 2ನೇ ಮಹಡಿಯ ರೂಮ್‌ನಲ್ಲಿ ತಂಗಿದ್ದರು.
ಜೀವನದಲ್ಲಿ ಜಿಗುಪ್ಸೆಗೊಂಡ ಇವರು, 2ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು, ಮಾ.8ರಂದು ರಾತ್ರಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.