ಗೂಡ್ಸ್ ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
Update: 2026-03-09 20:56 IST
ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ.
ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗುತ್ತಿದ್ದ ಗೂಡ್ಸ್ ಅಟೋ ರಿಕ್ಷಾ, ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಮೇಶ್ ಕಲ್ಕೂರ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.