×
Ad

ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

Update: 2026-03-10 21:08 IST

ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆ ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ ಗಳನ್ನು ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಪಡೆಯುತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಉಷಾ ಹಾಗೂ ನಸಿರ್ಂಗ್ ಅಧಿಕಾರಿ ಅರುಣ ಮಹಿಳಾ ದಿನಾಚರಣೆಯ ಕುರಿತಂತೆ ಮತಾನಾಡಿದರು.

ವೈದ್ಯಕೀಯ ತಜ್ಞರಾದ ಡಾ.ದಯಾಮಣಿ, ಡಾ. ದಿವ್ಯ, ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ. ವೀಣಾ ಕುಮಾರಿ, ಎಂ.ಸಿ.ಕೆ.ಎಸ್ ಫುಡ್ ಫಾರ್ ದಿಹಂಗ್ರೀ ಫೌಂಡೇಶನ್‌ನ ನಿಧಿ, ಆಸ್ಪತ್ರೆಯ ನಸಿರ್ಂಗ್ ಸೂಪರಿಂಟೆಂಡೆಂಟ್ ರತ್ನವತಿ ಮತ್ತಿತರರು ಉಪಸ್ಥಿತರಿದ್ದರು.

ಎನ್‌ಸಿಡಿಯ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು ಎಸ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News