ವ್ಯಕ್ತಿ ನಾಪತ್ತೆ
Update: 2026-03-10 21:10 IST
ಉಡುಪಿ, ಮಾ.10: ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬವರು ಮಾ.4ರಂದು ಬೆಳಗ್ಗೆ 9:30ರ ಸುಮಾರಿಗೆ ಬ್ಯಾಂಕ್‌ಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ಠಾಣೆ ಪಿ.ಐ ಮೊ.ನಂ: 9480805455 ಅನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.