×
Ad

ನೇತ್ರಜ್ಯೋತಿ ಕಾಲೇಜಿನಲ್ಲಿ ಅಂ.ರಾ.ಮಹಿಳಾ ದಿನಾಚರಣೆ

Update: 2026-03-10 21:27 IST

ಉಡುಪಿ, ಮಾ.10: ಉಡುಪಿಯ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ಭಂಡಾರಿ ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಕೃಷ್ಣಪ್ರಸಾದ್ ಕೂಡ್ಲು, ಮಹಿಳೆಯರು ಈಗ ಅಬಲೆ ಅಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಳ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು. ಕಾಲೇಜಿನ ಸಿಓಓ ಡಾ. ಗೌರಿ ಪ್ರಭು ಉಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಅಮೃತ ಕೃಷ್ಣಮೂರ್ತಿ, ಅರುಣಾಕಲಾ, ಅನಿತಾ ಬಾಳಿಗ, ಡಾ.ಕಾಂತಿ ಹರೀಶ್, ಡಾ.ಅರ್ಚನಾ ಎಂ.ವಿ., ಡಾ.ಶ್ರುತಿ ಬಲ್ಲಾಳ್ ಇವರನ್ನು ಸನ್ಮಾನಿಸಲಾಯಿತು.

ಮಾಧವ ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ವಿದ್ಯಾರ್ಥಿ ಚರಣರಾಜ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News