ವಿಶ್ವ ಮಹಿಳಾ ದಿನಾಚರಣೆ: ಆಶಾ ಕಾರ್ಯಕರ್ತೆಗೆ ಸನ್ಮಾನ
ಮಂಗಳೂರು, ಮಾ.10: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.9ರಂದು ವಿಶ್ವ ಮಹಿಳಾ ದಿನನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಮಂಗಳೂರು ಸಹಾಯಕ ಪೊಲೀಸ್ ಕಮಿಷನರ್ ಗೀತಾ ಡಿ.ಕುಲಕರ್ಣಿ ಮಾತನಾಡಿ, ಇಂದಿನ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಂಚೂಣಿ ಆರೋಗ್ಯ ಹೀರೋ ಆಗಿರುವ ಆಶಾ ಕಾರ್ಯಕರ್ತೆಯನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಪ್ರಸಾದ್ ನೇತ್ರಾಲಯ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್, ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್, ನಿರ್ದೇಶಕರುಗಳಾದ ಡಾ.ವಿಕ್ರಮ್ ಜೈನ್, ಡಾ.ಹರೀಶ್ ಶೆಟ್ಟಿ, ಡಾ.ಜೇಕಬ್, ಹಿರಿಯ ಸಲಹೆಗಾರರಾದ ಡಾ.ಶಿಬಿನ್, ಡಾ.ತೇಜಸ್ವಿನಿ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.