×
Ad

ಗಂಗೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Update: 2026-05-07 19:28 IST

ಕುಂದಾಪುರ, ಮೇ 7: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ವತಿಯಿಂದ ಗ್ರಾಪಂ ವ್ಯಾಪ್ತಿಯ ವಿವಿಧೆಡೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಬುಧವಾರ ನಡೆಯಿತು

ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ, ಉಪಾಧ್ಯಕ್ಷ ತಬ್ರೇಜ್, ಪಿಡಿಒ ರವಿ, ಕಾರ್ಯದರ್ಶಿ ಅನುಪ್ ಶೇಟ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು, ಎಸ್‌ಎಲ್‌ಆರ್‌ಎಂ ಘಟಕದ ಕಾರ್ಯಕರ್ತರು, ಸಿಬ್ಬಂದಿ ಮೊದಲಾದವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಗುಜ್ಜಾಡಿಯ ಬೆಣ್ಗೇರೆ ಕ್ರಾಸ್‌ನಿಂದ ಶ್ರೀರಾಮ ಮಂದಿರದವರೆಗೆ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸ ಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಕಸ ಹಾಕಿದವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಕಸ ಹಾಕಿದವರಿಗೆ 5 ಸಾವಿರ ರೂ. ದಂಡ ವಿಧಿಸಲಾಗುವುದು ತಪ್ಪಿತಸ್ಥರ ಫೋಟೋ ಅಥವಾ ವೀಡಿಯೋ ಮೂಲಕ ಆಧಾರ ಸಹಿತ ನೀಡಿದಲ್ಲಿ ಪಂಚಾಯತ್‌ನಿಂದ ಸೂಕ್ತ ಬಹುಮಾನ ನೀಡ ಲಾಗುವುದು. ಮಾಹಿತಿ ನೀಡಿದವರ ವಿವರ ಗೌಪ್ಯವಿಡಲಾಗುವುದು. ತಪ್ಪದೇ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛವಾಹಿನಿಗೆ ನೀಡಿ, ಪರಿಸರದ ಸ್ವಚ್ಚತೆ ಕಾಪಾಡಿ ಎಂದು ಗಂಗೊಳ್ಳಿ ಗ್ರಾಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News