×
Ad

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಆಯ್ಕೆ ಮಾಡಿದ ಪುಸ್ತಕ ಪ್ರಕಟ

Update: 2026-05-22 21:24 IST

ಉಡುಪಿ: 2022ನೇ ಸಾಲಿನಲ್ಲಿ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಕನ್ನಡ, ಇಂಗ್ಲೀಷ್, ಹಿಂದಿ ಮತ್ತು ಇತರೆ ಭಾರತೀಯ ಭಾಷೆಗಳ ಪುಸ್ತಕಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಆಯ್ಕೆ ಪಟ್ಟಿಯ ಪ್ರತಿಯನ್ನು ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶನ ಸಂಸ್ಥೆಗಳ ಹಾಗೂ ಸಾರ್ವಜನಿಕರ ತಿಳುವಳಿಕೆಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ಇಲ್ಲಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾ ಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2523438, 9740938025 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News