×
Ad

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ

Update: 2026-05-24 19:44 IST

ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು.

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರವು ಬೈಂದೂರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನ್ನೊಳಗೊಂಡ ಬಿಲ್ಲವ ಸಮಾಜದ ಮಾತೃ ಸಂಘ ಇದಾಗಿದ್ದು ಮುಂದಿನ 2 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮೂರನೇ ಬಾರಿಗೆ ಅಶೋಕ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭ ಮಾತನಾಡಿದ ಅವರು, ಸಮುದಾಯ ಇನ್ನಷ್ಟು ಬಲಿಷ್ಟರಾಗಲು ರಾಜಕೀಯ ಹಾಗೂ ಸಹಕಾರಿ ಕ್ಷೇತ್ರದಲ್ಲೂ ಬಿಲ್ಲವರು ಮುಂದೆ ಬರಲು ಅಗತ್ಯ ಚಿಂತನೆ ರೂಪಿಸಲಾಗುತ್ತದೆ. ಪಕ್ಷಾತೀತವಾಗಿ ಎಲ್ಲರನ್ನೂ ಒಗ್ಗೂಡಿ ಸಿಕೊಂಡು ಆರ್ಥಿಕ, ಶಿಕ್ಷಣ, ಸಂಘಟನಾತ್ಮಕವಾಗಿ ಸಮಾಜವನ್ನು ಮೇಲಸ್ತರಕ್ಕೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಹೆಮ್ಮಾಡಿಯಲ್ಲಿರುವ ಬಿಲ್ಲವ ಸಮಾಜ ಸೇವಾ ಸಂಘದ ಹೆಸರಿನಲ್ಲಿರುವ ಜಾಗದಲ್ಲಿ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಶಿಕ್ಷಣ ಸಂಸ್ಥೆ ನಿರ್ಮಿಸುವ ದೊಡ್ಡ ಗುರಿಯಿದೆ ಎಂದರು.

ಪದಾಧಿಕಾರಿಗಳು: ಗೌರವ ಅಧ್ಯಕ್ಷರಾಗಿ ನಾರಾಯಣ ಟಿ.ಪೂಜಾರಿ, ಉಪಾಧ್ಯಕ್ಷರುಗಳಾಗಿ ರಾಮ ಪೂಜಾರಿ ಮುಲ್ಲಿಮನೆ, ಮೋಹನ ಪೂಜಾರಿ ಉಪ್ಪುಂದ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಪೂಜಾರಿ ಕೋಡಿ, ಜೊತೆ ಕಾರ್ಯದರ್ಶಿಯಾಗಿ ಮಂಜು ಪೂಜಾರಿ ತೆಗ್ಗರ್ಸೆ, ಗೌರವ ಪ್ರಧಾನ ಕೋಶಾಧಿಕಾರಿಯಾಗಿ ವಿನಯ ಪೂಜಾರಿ ಬನ್ನಾಡಿ, ಜೊತೆ ಕೋಶಾಧಿಕಾರಿ ಸಂತೋಷ್ ಪೂಜಾರಿ ಬೀಜಾಡಿ ಅವಿರೊಧವಾಗಿ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News