×
Ad

ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2026-05-29 22:43 IST

ಶಂಕರನಾರಾಯಣ, ಮೇ 29: ಬಸ್ಸೊಂದು ಡಿಕ್ಕಿ ಹೊಡೆದು ಮೋಟಾರು ಸೈಕಲ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಕುಂದಾಪುರ- ಅಂಪಾರು ರಸ್ತೆಯ ಮೂಡುಬಗೆ ಬಾಳ್ಕಟ್ಟು ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬಸವ ನಾಯ್ಕ (80) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 11:45ರ ಸುಮಾರಿಗೆ ಬಸವ ನಾಯ್ಕ ಅವರು ಶಾನ್ಕಟ್ಟು ರಸ್ತೆಯಲ್ಲಿ ಸಾಗುತ್ತಿರುವಾಗ ಸಿದ್ಧಾಪುರ ಕಡೆಯಿಂದ ವೇಗವಾಗಿ ಬಂದ ಬಸ್ ಬಸವ ಅವರ ಮೋಟಾರು ಸೈಕಲ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಸ್ವಲ್ಪದೂರ ಬೈಕ್‌ನ್ನು ಎಳೆದುಕೊಂಡು ಹೋಗಿತ್ತು. ತೀವ್ರವಾಗಿ ಗಾಯಗೊಂಡ ಬಸವ ನಾಯ್ಕರನ್ನು ಸಾರ್ವಜನಿಕರು ಉಪಚರಿಸಿ ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡಿದ್ದು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News