ಏಸ್ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
Update: 2026-05-30 22:11 IST
ಬೈಂದೂರು, ಮೇ 30: ಇಲ್ಲಿಗೆ ಸಮೀಪದ ಕಂಬದಕೋಣೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಾಟಾ ಏಸ್ ವಾಹನವೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ಕಂಬದಕೋಣೆಯ ಯೋಗೀಶ್ ಪೂಜಾರಿ ಎಂದು ಗುರುತಿಸ ಲಾಗಿದೆ. ಮೇ 27ರಂದು ಮಧ್ಯಾಹ್ನ ಕಂಬಕೋಣೆ ಜಂಕ್ಷನ್‌ನಲ್ಲಿ ರಸ್ತೆಯನ್ನು ಕ್ರಾಸ್ ಮಾಡುತ್ತಿದ್ದ ಸ್ಕೂಟರ್‌ಗೆ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಯೋಗೀಶ್, ಚಿಕಿತ್ಸೆಗೆ ಸ್ವಂದಿಸದೆ ಕುಂದಾಪುರ ಖಾಸಗಿ ಆಸ್ಪತ್ರೆ ಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಆರೋಪಿ ಚಾಲಕನು ಘಟನೆಯ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡದೇ ಇರುವುದರಿಂದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.