×
Ad

ಡಿಕೆಶಿ ಸಂಪುಟದಲ್ಲಿ ಜಾರ್ಜ್‌ಗೆ ಡಿಸಿಎಂ, ಐವನ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

Update: 2026-05-31 20:08 IST

ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ.ಶಿವಕುಮಾರ್ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ.ಜೆ.ಜಾರ್ಜ್ ಅವರಿಗೆ ಉಪ ಮುಖ್ಯಮಂತ್ರಿ ಹಾಗೂ ಕರಾವಳಿಯ ಐವನ್ ಡಿಸೋಜ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹಿಸಿದೆ.

ಕೆ.ಜೆ.ಜಾರ್ಜ್ ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿ ದ್ದಾರೆ. ಕ್ರೈಸ್ತ ಸಮುದಾಯಕ್ಕೆ ಈವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ. ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.

ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ.

ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿತವಾಗಿದ್ದು ಈ ಬಾರಿ ಡಿಕೆಶಿ ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಸಂಘಟನೆಯ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News