×
Ad

ನಿಂತಿದ್ದ ಲಾರಿಗೆ ಗೂಡ್ಸ್ ಟೆಂಪೋ ಢಿಕ್ಕಿ: ಚಾಲಕ ಮೃತ್ಯು

Update: 2026-05-31 20:55 IST

ಮಲ್ಪೆ, ಮೇ 31: ಅಂಡರ್‌ಪಾಸ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ಟೆಂಪೋವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮೇ 31ರಂದು ಬೆಳಗ್ಗೆ 6ಗಂಟೆ ಸುಮಾರಿಗೆ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಶಿವಮೊಗ್ಗದ ಪ್ರಶಾಂತ ಪಿ.(28) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಸಂತೆಕಟ್ಟೆಗೆ ತನ್ನ ಗೂಡ್ಸ್ ವಾಹನದಲ್ಲಿ ಬಾಡಿಗೆ ಮಾಡಿಕೊಂಡು ಬರುತ್ತಿದ್ದರು. ಕಟಪಾಡಿ ಕಡೆಯಿಂದ ಕರಾವಳಿ ಕಡೆಗೆ ಬರುತ್ತಿ ದ್ದಾಗ ಅಂಡರ್‌ಪಾಸ್‌ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಗೂಡ್ಸ್ ವಾಹನ ಭಾಗಶಃ ಲಾರಿಯ ಹಿಂಭಾಗದ ಒಳಗೆ ನುಗ್ಗಿ ನುಚ್ಚು ಆಗಿದ್ದು, ಸಂಪೂರ್ಣ ಜಖಂಗೊಂಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಪ್ರಶಾಂತ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News