ಕೋಡಿಬೇಂಗ್ರೆ ಬೀಚ್‌ನಲ್ಲಿ ಮುಳುಗಿ ಪ್ರವಾಸಿಗ ಮೃತ್ಯು
Update: 2026-06-01 22:24 IST
ಮಲ್ಪೆ, ಜೂ.1: ಕೋಡಿಬೇಂಗ್ರೆ ಡೆಲ್ಟಾ ಬೀಚ್‌ನ ನೀರಿನಲ್ಲಿ ಮುಳುಗಿ ಪ್ರವಾಸಿಗರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೆಂಗಳೂರಿನ ಕುಶಲ್ ಎಸ್.(31) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಹಾಗೂ ಮಗುವಿನ ಜೊತೆ 3 ದಿನಗಳ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದು, ಮೇ 30ರಂದು ಸಂಜೆ ಕೋಡಿಬೇಂಗ್ರೆ ಡೆಲ್ಟಾ ಬೀಚ್‌ಗೆ ತೆರಳಿದ್ದರು. ಅಲ್ಲಿ ಸಮುದ್ರದಲ್ಲಿ ಕುಶಲ್ ಕಾಲು ತೊಳೆಯುತ್ತಿರು ವಾಗ ಅಲೆಯಿಂದ ಆಯತಪ್ಪಿ ನೀರಿಗೆ ಬಿದ್ದರೆನ್ನಲಾಗಿದೆ. ಇದರಿಂದ ತೀವ್ರ ವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಶಲ್, ಮೇ 31ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.