×
Ad

ಶಿಕ್ಷಣಕ್ಕೆ ಬಡತನ ಎಂದೂ ಅಡ್ಡಿಯಾಗದು: ದಯಾನಂದ

Update: 2026-06-02 21:34 IST

ಉಡುಪಿ, ಜೂ.2: ಇಂದಿನ ಸಂದರ್ಭದಲ್ಲಿ ಬಡತನ ರೇಖೆಯಲ್ಲಿರುವ ಅಥವಾ ಕೆಳಗಿರುವ ವಿದ್ಯಾರ್ಥಿಗಳ ಶಿಕ್ಷಣವನ್ನು ಮುಂದುವರಿಸಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ಹೇಳಿದ್ದಾರೆ.

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಶಾಲಾ ಸಭಾಂಗಣದಲ್ಲಿ ಜರಗಿದ ಪಿಯುಸಿ ವಿದ್ಯಾರ್ಥಿಗಳಿಗೆ ಯು.ಎಫ್.ಸಿ. ಪುಸ್ತಕ ಭಂಢಾರದಿಂದ ಪಠ್ಯ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.

ಶಿಕ್ಷಣದೊಂದಿಗೆ ಮಾನವೀಯತೆಯನ್ನು ಬೆಳೆಸಿ ಕೊಂಡಾಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ಬೆಲೆ ಬರುತ್ತದೆ. ಇಲ್ಲಿ ಪಡಕೊಂಡ ಪುಸ್ತಕ ವ್ಯಕ್ತಿತ್ವವನ್ನು ರೂಪಿಸುತ್ತದೆ. ಅದನ್ನು ಎಂದೂ ಮರೆಯಬಾರದು. ಮಕ್ಕಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಜವಾಬ್ದಾರಿ ಹೆತ್ತವರದ್ದಾ ಗಿದೆ. ನಮ್ಮ ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಸದೇ ಅವರನ್ನು ಅವರಷ್ಟಕ್ಕೆ ಬೆಳೆಯಲು ಬಿಡಬೇಕು ಎಂದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಭಂಡಾರಿ, ಶರತ್ ಕುಮಾರ್, ಯು.ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ.ಸಾಲ್ಯಾನ್ ಉಪಸ್ಥಿತರಿದ್ದರು.

ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ವಂದಿಸಿದರು. ಸುಮಾರು 100 ವಿದ್ಯಾರ್ಥಿಗಳು ಪುಸ್ತಕ ಭಂಡಾರದಿಂದ ಪಠ್ಯ ಪುಸ್ತಕಗಳನ್ನು ಪಡಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News