ಪಿಕ್‌ಅಪ್ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2026-06-03 21:47 IST
ಕೋಟ, ಜೂ.3: ಪಿಕ್‌ಅಪ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ತೆಕ್ಕಟ್ಟೆ ಮೆಡಿಕಲ್ ಶಾಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.2ರಂದು ರಾತ್ರಿ 9.45ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಗಣೇಶ ಪೂಜಾರಿ ಎಂದು ಗುರುತಿಸಲಾಗಿದೆ. ಮಲ್ಯಾಡಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ಪಿಕಪ್ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರ ಗಣೇಶ್ ಪೂಜಾರಿ, ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.