×
Ad

ಕುಂದಾಪುರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ

Update: 2026-06-03 22:32 IST

ಕುಂದಾಪುರ, ಜೂನ್ 3: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಅಳವಡಿಸಲಾಗಿದ್ದ ಬೃಹತ್ ಎಲ್‌ಇಡಿ ಟಿವಿಯಲ್ಲಿ ವೀಕ್ಷಿಸಲಾಯಿತು.

ಕೆಪಿಸಿಸಿ ವತಿಯಿಂದ ಪ್ರಸಾರವಾದ ಪ್ರಮಾಣವಚನ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿ ಗಳು ಹಾಗೂ ಸಾರ್ವಜನಿಕರು ಆಸಕ್ತಿಯಿಂದ ವೀಕ್ಷಿಸಿದರು. ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಚೇರಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸೋಶಿಯಲ್ ಮೀಡಿಯಾ ಜಿಲ್ಲಾ ಅಧ್ಯಕ್ಷ ರೋಷನ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾವತಿ ಶೆಟ್ಟಿ, ಚಂದ್ರಶೇಖರ ಖಾರ್ವಿ, ಅಶೋಕ್ ಸುವರ್ಣ, ಸದಾನಂದ ಖಾರ್ವಿ, ಶಶಿರಾಜ್ ಪೂಜಾರಿ, ಶಶಿಧರ ಹಾಗೂ ಮುಖಂಡರಾದ ಸುಧಾಕರ ಹಂಗ್ಲೂರು, ಚಂದ್ರಕಾಂತ ನಾಯ್ಕ್, ಅಭಿಜಿತ್ ಪೂಜಾರಿ , ಪ್ರಭಾಕರ್ ಕಡ್ಗಿಮನೆ , ಕ್ಲಿಫರ್ಡ್ ಡಿಸಿಲ್ವಾ, ಜಾಯ್ ರೆಬೆಲ್ಲೊ, ಆಶಾ ಕರ್ವಾಲೋ, ನಿತಿನ್ ಡಿಸೋಜಾ ಕೋಣಿ, ಉದಯ ಪೂಜಾರಿ, ಸ್ಟೀವನ್ ಡಿಕೋಸ್ಟಾ , ಡೆನಿಸ್ ಕೋತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೂತನ ಮುಖ್ಯಮಂತ್ರಿಗೆ ಶುಭ ಹಾರೈಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News