×
Ad

ನಿಡಂಬಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಉದ್ಘಾಟನೆ

Update: 2026-06-06 19:38 IST

ಉಡುಪಿ, ಜೂ.6: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಆರೋಗ್ಯ ಕ್ಷೇತ್ರದ ಸರಕಾರದ ಯೋಜನೆ, ಸೇವೆಗಳು ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದರು.

ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ, ವೈದ್ಯೆ ಡಾ.ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರುಪ್ರಸಾದ್, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ್ ಕುಂದರ್, ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ ತಿಂಗಳಾಯ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ರಾಪಂ ಮಾಜಿ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News