×
Ad

ಕಲಾತಂಡ, ಕಲಾವಿದರಿಂದ ಅರ್ಜಿ ಆಹ್ವಾನ

Update: 2026-06-06 21:02 IST

ಉಡುಪಿ, ಜೂ.6: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಸಂಸ್ಥೆಯ ವತಿಯಿಂದ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪಾನೆಲ್ ಮಾಡುವ ಜೊತೆಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರ ಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ಜೂನ್ 12ರ ಒಳಗಾಗಿ ವೆಬ್‌ಸೈಟ್ - www.kannadasiri.karnataka.gov.in- ಅರ್ಜಿಯನ್ನು ಪಡೆದು, ಅವುಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿ ಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News