ಬೈಂದೂರು: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ
Update: 2026-06-10 21:36 IST
ಉಡುಪಿ, ಜೂ.10: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಬೈಂದೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾಲೂಕು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08254-251657ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೈಂದೂರು ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.