×
Ad

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

Update: 2026-06-11 19:37 IST

ಉಡುಪಿ: ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು- 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ/ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಎರಡು ವರ್ಷ ಹೆಚ್ಚಿನ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸ ಲಾಗಿದೆ.

ಈ ನೇಮಕಾತಿ 2027ರ ಮಾರ್ಚ್ 31ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿ ದ್ದಲ್ಲಿ), ಈ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿ ವೇಳೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 22ರ ಒಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲೆ ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಸೃಷ್ಟಿವಾಗಿ ನಮೂದಿಸಿರಬೇಕು.

ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನ ಪಕ್ರಿಯೆ ನಂತರ ಆಯ್ಕೆ ಮಾಡಲಾಗು ವುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News