ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ
Update: 2026-06-12 21:25 IST
ಉಡುಪಿ, ಜೂ.12: ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾಪು ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಜುಲೈ 11ರ ಶನಿವಾರದಂದು ರೈತ ಸಂಪರ್ಕ ಕೇಂದ್ರ ಕಾಪು ತಾಲೂಕು ಇಲ್ಲಿ ಬೆಳಗ್ಗೆ 8 ರಿಂದ ಅಪರಾಹ್ನ 3 ಗಂಟೆಯವರೆಗೆ ನಿಗದಿಪಡಿಸಲಾಗಿದೆ.
ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಉಮೇದುದಾರರಿಗೆ ಜೂನ್ 30 ರಿಂದ ಕೃಷಿ ಅಧಿಕಾರಿ ಅವರ ಕಚೇರಿ, ರೈತ ಸಂಪರ್ಕ ಕೇಂದ್ರ, ಕಾಪು ಇಲ್ಲಿ ನಾಮಪತ್ರ ವಿತರಿಸಲಾಗುವುದು. ಆಕಾಂಕ್ಷಿಗಳು ಚುನಾವಣಾಧಿಕಾರಿಗಳಿಗೆ ಅರ್ಜಿ ಮೂಲಕ 250ರೂ.ಗಳನ್ನು ಠೇವಣಿಯಾಗಿ ಪಾವತಿಸಿದ ಮೂಲ ರಶೀದಿ ಹಾಗೂ ಸಂಬಂಧಿಸಿದ ತಹಶೀಲ್ದಾರರಿಂದ ದೃಢೀಕೃತ ಪಹಣಿ ಪ್ರತಿಯೊಂದಿಗೆ ನಾಮಪತ್ರ ಸಲ್ಲಿಸಲು ಜುಲೈ 4ರಂದು ಸಂಜೆ 5ವರೆಗೆ ಅವಕಾಶವಿರುತ್ತದೆ ಎಂದು ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.