ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೃಷ್ಣ ಮಠ ಭೇಟಿ
Update: 2026-06-13 17:43 IST
ಉಡುಪಿ, ಜೂ.13: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಸಚಿವರು ಪರ್ಯಾಯ ಶಿರೂರು ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರಿಂದ ಫಲ ಮಂತ್ರಾ ಕ್ಷತೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಸಚಿವರು ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.
ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು