×
Ad

ಕ್ರೈಸ್ತ ವಿದ್ಯಾರ್ಥಿಗಳಿಗೆ ಅರಿವು ವಿದ್ಯಾಭ್ಯಾಸ ಸಾಲ

Update: 2026-06-13 17:57 IST

ಉಡುಪಿ, ಜೂ.13: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನ ಮಾಡುತ್ತಿರುವ ಅರಿವು ವಿದ್ಯಾಭ್ಯಾಸ ಸಾಲಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಮನವಿ ಮಾಡಿದ್ದಾರೆ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ 2026-27ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನು ಮೋದಿತ ಕಾರ್ಯಕ್ರಮವಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ ಅಥವಾ ನೀಟ್ ಅಥವಾ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ/ಎಂಎಸ್ ಕೋರ್ಸ್‌ಗಳಿಗೆ ಸರ್ಕಾರಿ ಕಾಲೇಜು/ಖಾಸಗಿ/ಮ್ಯಾನೇಜ್ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಗರಿಷ್ಠ 5 ಲಕ್ಷದವರೆಗೆ ಸಾಲ ನೀಡುತ್ತಿದ್ದು, ವೃತ್ತಿಪರ ಎಂಬಿಬಿಎಸ್, ಎಂಡಿ, ಬಿಡಿಎಸ್, ಎಂಡಿಎಸ್, ಬಿ ಆಯುಷ್, ಎಂ ಆಯುಷ್, ಬಿಇ, ಬಿಟೆಕ್, ಎಂಟೆಕ್, ಎಂಇ, ಬಿ ಆರ್ಕ್, ಎಂ ಆರ್ಕ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬಿಎಸ್ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ ಆ್ಯಂಡ್ ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ ಮೊದಲಾದ ಈ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರಿವು ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News