×
Ad

ಪತ್ರಕರ್ತ ಸುಬ್ರಹ್ಮಣ್ಯ ಕುರ್ಯಗೆ ಯಶೋ ಮಾಧ್ಯಮ ಪ್ರಶಸ್ತಿ ಪ್ರದಾನ

Update: 2026-06-15 21:18 IST

ಉಡುಪಿ, ಜೂ.15: ಬೆಂಗಳೂರಿನ ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಉಡುಪಿ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರರಾದ ಸುಬ್ರಹ್ಮಣ್ಯ ಜಿ.ಕುರ್ಯ ರವರಿಗೆ ಯಶೋ ಮಾಧ್ಯಮ-2026 ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಉಡುಪಿ ಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ ಎಂದು ಹೇಳಿದರು.

ಪತ್ರಕರ್ತ ಜನಾರ್ದನ್ ಕೊಡವೂರು, ಕಲ್ಯಾಣಪುರದ ಶ್ರೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ರಾಮರಾಯ್ ಕಿಣಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಕಾರಂತ್, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕಿ ಡಾ.ಮರಿಯಾ ಪಾಯಸ್, ಕಲ್ಯಾಣಪುರ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ ದೇವಾಡಿಗ ಮಾತನಾಡಿದರು.

ರಾಘವೇಂದ್ರ ಪ್ರಭು ಕರ್ವಾಲು ನೇತೃತ್ವದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ಸುತ್ತಮುತ್ತ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಮಾಜ ಸೇವಕ ಪ್ರಕಾಶ್ ಕಾಮತ್ ಅವರನ್ನು ಸನ್ಮಾನಿಸ ಲಾಯಿತು.

ಈ ಸಂದರ್ಭದಲ್ಲಿ ಸುಮನಾ ಪೈ, ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ, ಖಜಾಂಚಿರಜನಿ ವಿ.ಪೈ, ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಶೆಟ್ಟಿ, ಯೂತ್ ಆಫ್ ಜಿ.ಎಸ್‌ಬಿಯ ಸದಸ್ಯ ಅಜಿತ್ ಪೈ ಉಪಸ್ಥಿತರಿದ್ದರು. ವೆಂಕಟೇಶ್ ಪೈ ಸ್ವಾಗತಿಸಿದರು. ಸಂತೋಷ್ ಕಾಮತ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News