ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
Update: 2026-06-17 21:10 IST
ಕಾರ್ಕಳ, ಜೂ.17: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಮುಡ್ಕೂರು ಗ್ರಾಮದ ರಮೇಶ್ ಸಫಲಿಗ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.16ರಂದು ರಾತ್ರಿ ಮನೆಯ ಬಾತ್ ರೂಮ್‌ನ ಮೇಲ್ಚಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವೈಯಕ್ತಿಕ ಕಾರಣದಿಂದ ಮನನೊಂದ ಕಾಲ್ತೋಡು ಗ್ರಾಮದ ಹೊಸಮನೆ ನಿವಾಸಿ ಶೇಖರ ಶೆಟ್ಟಿ(57) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.16ರಂದು ಮಧ್ಯಾಹ್ನ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.