×
Ad

ಪಾದಚಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು

Update: 2026-06-19 22:04 IST

ಕುಂದಾಪುರ, ಜೂ.19: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಅಲಂಕಾರ್ ಬಾರ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.18ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಸ್ಕೂಟರ್ ಸವಾರ ಅವದೇಶ ಎಂದು ಗುರುತಿಸಲಾಗಿದೆ. ಕೊಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆ ದಾಟುತ್ತಿದ್ದ ಯಲ್ಲಪ್ಪ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಅವದೇಶ ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದು ಗಾಯಗೊಂಡರು. ಗಂಭೀರ ಸ್ಥಿತಿಯಲ್ಲಿದ್ದ ಅವದೇಶ, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅಪಘಾತ ದಿಂದ ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಅವರನ್ನುಆಸ್ಪತ್ರೆಗೆ ದಾಖಲಿಸ ಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News