×
Ad

ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2026-06-19 22:07 IST

ಕೋಟ, ಜೂ.19: ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಂಚಾರು ಗ್ರಾಮದ ತಾರೇಕಟ್ಟೆ ಎಂಬಲ್ಲಿ ಜೂ.18ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ನಂಚಾರು ಗ್ರಾಮದ ಮಹೇಶ ನಾಯರಿ (53) ಎಂದು ಗುರುತಿಸಲಾಗಿದೆ. ಇವರು ಮನೆಯ ಹತ್ತಿರದ ತೋಟಕ್ಕೆ ಹೋಗಿ ಕೆರೆಯ ಪಕ್ಕದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಅವರು ಆವರಣ ಗೋಡೆಯಿಲ್ಲದ ತೋಟದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News