ಮಲ್ಪೆ ಮಸೀದಿಯಲ್ಲಿ ಎಸ್‌ಐಆರ್ ಕಾರ್ಯಾಗಾರ
Update: 2026-06-20 20:38 IST
ಮಲ್ಪೆ: ಮಲ್ಪೆ ಸೈಯ್ಯದ್ ಅಬೂಬಕ್ಕರ್ ಸಿದ್ದೀಕ್ ಮಸೀದಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಅಂಗವಾಗಿ ಮತದಾರರ ಎಣಿಕೆ ನಮೂನೆ ಭರ್ತಿ ಮಾಡುವ ಕುರಿತ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ನ್ಯಾಯವಾದಿ ಯಾಸೀನ್ ಕೊಡಿಬೆಂಗ್ರೆ, ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವವನ್ನು ಸವಿವರವಾಗಿ ತಿಳಿಸಿದರು. ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡುವ ವಿಧಾನ ಹಾಗೂ ಅದಕ್ಕೆ ಲಗತ್ತಿಸಬೇಕಾದ ಅಗತ್ಯ ದಾಖಲೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಸ್ಥಳೀಯ ಸಮುದಾಯದ ಪ್ರಮುಖರು, ಸಾರ್ವಜನಿಕರು ಹಾಗೂ ಹಲವಾರು ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡು ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಪಡೆದುಕೊಂಡರು.