ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
Update: 2026-06-20 20:42 IST
ಕಾಪು, ಜೂ.20: ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.19ರಂದು ಸಂಜೆ 7.30ಕ್ಕೆ ನಡೆದಿದೆ.
ಮೃತರನ್ನು ಪಾಂಗಾಳದ ನಿವಾಸಿ ಶ್ರೀಮತಿ(73) ಎಂದು ಗುರುತಿಸ ಲಾಗಿದೆ. ಪಾಂಗಾಳ ಜನಾರ್ದನ ದೇವಸ್ಥಾನಕ್ಕೆ ಬಂದಿದ್ದ ಇವರು, ಬಳಿಕ ರಸ್ತೆಯ ಇನ್ನೊಂದು ಬದಿಯ ಅಂಗಡಿಯಿಂದ ಹಾಲು ಖರೀದಿಸಿದರು. ಅಲ್ಲಿಂದ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಇವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ವೇಗದೂತ ಬಸ್, ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶ್ರೀಮತಿ, ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.