ಬಿಜೆಪಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ, ಜೂ.21: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದರ್, ಆರೋಗ್ಯ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಟ್ ಉಪಸ್ಥಿತರಿದ್ದರು.
ಯೋಗ ಶಿಕ್ಷಕಿ ಮಮತಾ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಹ ಶಿಕ್ಷಕ ಗಣೇಶ್ ಆಚಾರ್ಯ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.