×
Ad

ಉಡುಪಿ: ಹಾಶಿಮಿ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

Update: 2026-06-21 21:34 IST

ಉಡುಪಿ: ಹಾಶಿಮಿ ಮಸೀದಿ, ನಾಯರ್‌ಕೆರೆ - ಬ್ರಹ್ಮಗಿರಿಯ ಮೌಲಾನಾ ಒಬೈದುರ್ ರಹ್ಮಾನ್ ನದ್ವಿ ಅವರು ಇಂದು ಮಳೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಈ ವರ್ಷದ ಮುಂಗಾರು ಮಳೆ ಕಡಿಮೆಯಾಗಿರುವುದರಿಂದ ರೈತರು, ಕೃಷಿ ಉತ್ಪನ್ನಗಳು ಹಾಗೂ ಕುಡಿಯುವ ನೀರಿನ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಈ ವಿಶೇಷ ಪ್ರಾರ್ಥನೆಯಲ್ಲಿ ಮಹಿಳೆಯರೂ ಭಾಗವಹಿಸಿದ್ದರು. ಮಸೀದಿಯ ಅಧ್ಯಕ್ಷರಾದ ಮೊಹಮ್ಮದ್ ಝಕ್ರಿಯ ಅಸ್ಸಾದಿ ಹಾಗೂ ಕಾರ್ಯದರ್ಶಿ ಎಂ. ಇಕ್ಬಾಲ್ ಮನ್ನಾ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News