ಹೊಳೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು
Update: 2026-06-21 22:31 IST
ಬೈಂದೂರು, ಜೂ.21: ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಜೂ.20ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಉಪ್ಪುಂದ ಗ್ರಾಮದ ನಾರಾಯಣ ಖಾರ್ವಿ (64) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಮಾಡಿ ಕೊಂಡಿದ್ದ ಇವರು, ಯಡ್ತರೆ ಗ್ರಾಮದ ಅಂಕಣಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಅಲ್ಲಿ ಅವರು ಅಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.