ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
Update: 2026-06-21 22:33 IST
ಕೋಟ, ಜೂ.21: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ವೇಳೆ ಕೋಟ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ಯ(45) ಎಂದು ಗುರುತಿಸಲಾಗಿದೆ. ಇವರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತಿದ್ದರು. ಆಗ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಸತೀಶ್ ಆಚಾರ್ಯ,್ನ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.